ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ವತಿಯಿಂದ ಅ.28ರಂದು ಸಂಜೆ 6ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ 2023-24 ಮತ್ತು 2024-25ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.


ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್.ಎಸ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸದ ಪಿ.ಸಿ. ಮೋಹನ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕವನ್ನು ಬಿಡುಗಡೆ ಮಾಡಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್ ಎಂ.ಎನ್ ಮತ್ತು ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಉಪಸ್ಥಿತರಿರುತ್ತಾರೆ.

Also Read  ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ

 

error: Content is protected !!
Scroll to Top