ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಗಾಯಾಳುವಿಗೆ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top