ಈಜಲು ಹೋದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಅ.26, ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಅ.26 ರಂದು ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.

ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕನಾಗಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top