(ನ್ಯೂಸ್ ಕಡಬ) newskadaba.com ಭುವನೇಶ್ವರ, ಅ.26. ‘ಡಾನಾ’ ಚಂಡಮಾರುತದಿಂದ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ. ಜೊತೆಗೆ, 2.80 ಲಕ್ಷ ಎಕರೆ ಪ್ರದೇಶ ಜಲಾವೃತಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಡಾನಾ ಚಂಡಮಾರುತದಿಂದ ಉಂಟಾಗಿರುವ ಬೆಳೆ ನಷ್ಟದ ಕುರಿತು ಜಂಟಿ ಮೌಲ್ಯಮಾಪನ ನಡೆಸುವಂತೆ ಕೃಷಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ತಿಳಿಸಿದ್ದಾರೆ. ಚಂಡಮಾರುತದ ಹಾನಿ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಸಿಎಂ ಮೋಹನ್ ಚರಣ್ ಮಾಝಿ ಅವರು ‘ಚಂಡಮಾರುತದಿಂದಾಗಿ ಕೃಷಿ ಕ್ಷೇತ್ರದಲ್ಲಿ ಉಂಟಾಗಿರುವ ನಷ್ಟದ ಅಂತಿಮ ಅಂದಾಜಿನ ವಿವರ ವರದಿ ತಿಳಿದುಬರುತ್ತದೆ.