(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಕರ್ನಾಟಕದಲ್ಲಿ ಆಹಾರ ಗುಣಮಟ್ಟದ ವಿಚಾರದಲ್ಲಿ ಕಠಿಣ ನಿಲುವು ತಳೆದಿರುವ ಆಹಾರ ಇಲಾಖೆ, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಗೆ ಈಗಾಗಲೇ ನಿರ್ಬಂಧ ವಿಧಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ, ಮಾಲ್ಗಳಲ್ಲಿ ಫುಡ್ ಟೆಸ್ಟಿಂಗ್ ಕಿಟ್ ಇರಿಸಿ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಗೋಲ್ ಗಪ್ಪಾ ಪ್ರಿಯರಿಗೂ ಶಾಕ್ ಎದುರಾಗುವ ಸಾಧ್ಯತೆ ಇದೆ. ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಕಾರಣ ಗೋಲ್ ಗಪ್ಪಾ ಪೂರಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಗೋಲ್ ಗಪ್ಪಾವನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.