ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ


(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

 

ಈ ಅವಧಿಯಲ್ಲಿ  ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ಯಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸಲು ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವಜೆರಾಕ್ಸ್ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ.

Also Read  ಭಟ್ಕಳ : ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಕುಂದಾಪುಕ್ಕೆ ವರ್ಗಾವಣೆ

ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು/ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹನೆ ವೇಳೆ ಲಾಠಿ/ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ. ಈ ಆದೇಶವು ಜಿಲ್ಲಾಧಿಕಾರಿಗಳ ಅಥವಾ ಸಂಬಂಧಿಸಿದ ಉಪವಿಭಾಗ ದಂಡಾಧಿಕಾರಿಯವರ ಅಥವಾ ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿಯವರ ಪೂರ್ವಾನುಮತಿಯಂತೆ ನಡೆಸುವ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also Read  ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

error: Content is protected !!
Scroll to Top