(ನ್ಯೂಸ್ ಕಡಬ)newskadaba.com, ಅ.28, ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ, ಜಾತ್ಯಾತೀತ ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್ ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು.