ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ



(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿಯಾಗಿದ್ದಾರೆ.








ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು. ಮನೆ ಮೇಲೆ ದಾಳಿ ನಡೆದ ವಿಚಾರ ತಿಳಿದು ವಾಕಿಂಗ್‌ ಮಾಡುತ್ತಿದ್ದ ಸ್ಥಳದಿಂದಲೇ ದಿನೇಶ್‌ ಕುಮಾರ್‌ ಪರಾರಿಯಾಗಿದ್ದಾರೆ.






 

error: Content is protected !!
Scroll to Top