(ನ್ಯೂಸ್ ಕಡಬ)newskadaba.com, ಅ.28,ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 7045 ನೌಕರರ ಸೇವೆಯನ್ನು 2025ರ ಮಾರ್ಚ್‌ವರೆಗೆ ಮುಂದುವರೆಸಲಾಗುವುದು ಎಂದು ಕರ್ನಾಟಕದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಈಮೂಲಕ ಅವರ ಸೇವೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದುವರಿಕೆ ಮಾಡಲಾಗುತ್ತದೆ. ಮುಂದುವರೆದು, ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅಭಿಯೋಜನಾ ಇಲಾಖೆಯ 12 ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.