ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಿಕೆ ತೀರ್ಮಾನ-ಸಚಿವ ಸಂಪುಟ

(ನ್ಯೂಸ್ ಕಡಬ)newskadaba.com,.28,ನವದೆಹಲಿ: ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ‌ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ನಿವೃತ್ತ ಹೈ ಕೋರ್ಟ್, ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Also Read  RRR ಚಿತ್ರದ 'ನಾಟು ನಾಟು' ಹಾಡಿಗೆ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ

error: Content is protected !!
Scroll to Top