ಪಟಾಕಿ ದುರಂತ: 154 ಮಂದಿ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.29. ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Also Read  ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

 

error: Content is protected !!
Scroll to Top