(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.