ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ: ಪ್ರಧಾನಿ ಮೋದಿಯಿಂದ ಇಂದು ಚಾಲನೆ

(ನ್ಯೂಸ್ ಕಡಬ)newskadaba.com,. 29 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು  ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ನೀಡುವ ಸರ್ಕಾರದ ಯೋಜನೆಯನ್ನು ಇಂದು ಉದ್ಘಾಟಿಸಲಿದ್ದಾರೆ.

ವಾಡಿಕೆಯ ಪ್ರತಿರಕ್ಷಣೆಗಳ ವಿದ್ಯುನ್ಮಾನ ನೋಂದಾವಣೆಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್, ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದನ್ನು ಸಹ ಇಂದು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ. ಇವೆರಡನ್ನು ಹೊರತುಪಡಿಸಿ, ಇನ್ನೂ ಕೆಲವು ಯೋಜನೆಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ. ಈಗಾಗಲೇ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಮತ್ತೆ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಅವರ eKYC ನ್ನು ಮತ್ತೆ ಪೂರ್ಣಗೊಳಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Also Read  ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

ಬಡವರು, ಮಧ್ಯಮ ವರ್ಗದವರು, ಮೇಲ್ಮಧ್ಯಮ ವರ್ಗದವರು ಅಥವಾ ಶ್ರೀಮಂತರು ಯಾವುದೇ ವರ್ಗದವರಾಗಿರಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬ ವ್ಯಕ್ತಿಯೂ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಹರಾಗಿರುತ್ತಾರೆ. ವಿಸ್ತೃತ ಯೋಜನೆ ಪಡೆದ ನಂತರ ಯಾವುದೇ AB PMJAY ಎಂಪನೆಲ್ಡ್ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ.

error: Content is protected !!
Scroll to Top