(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ಮನೋಸ್ಥೆರ್ಯ” ಪ್ರೌಢಶಾಲಾ ಶಿಕ್ಷಕರಿಗೆ ಮಾನಸಿಕ ಆರೋಗ್ಯದ ತರಬೇತಿ ಕಾರ್ಯಗಾರವನ್ನು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಡಯಟ್ ಉಪನಿರ್ದೇಶಕಿ ರಾಜಲಕ್ಷ್ಮಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಎಸ್ ಪಟಗಾರ್ ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮನೋರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಿಥುನ್, ಕೆಎಂಸಿ ಮೆಡಿಕಲ್ ಕಾಲೇಜು ಮನೋರೋಗ ವಿಭಾಗ ಮುಖ್ಯಸ್ಥೆ ಡಾ. ಸುಪ್ರಿಯಾ ಹೆಗ್ಡೆ, ಮನೋರೋಗ ತಜ್ಞರು ಡಾ.ಕೆರೋಲಿನ್ ಡಿ’ಸೋಜ, ಬಜಾಲ್ ನ ಲಿಂಕ್ ವ್ಯಾಸನ ಮುಕ್ತ ಕೇಂದ್ರದ ಆಡಳಿತಾಧಿಕಾರಿ ಲಿಡಿಯಾ ಲೋಬೋ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.