ಇಂದು ಮಕ್ಕಳ ಸಂಸತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.29. ಮುಖ್ಯಮಂತ್ರಿಗಳೊಂದಿಗೆ ನವೆಂಬರ್ 14ರಂದು ರಾಜ್ಯಮಟ್ಟದಲ್ಲಿ ನಡೆಯುವ ಮಕ್ಕಳ ಹಕ್ಕುಗಳ ಸಂಸತ್ ನ ಪೂರ್ವಭಾವಿಯಾಗಿ, ದ.ಕ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್-24 ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 9.30ರಿಂದ ಕದ್ರಿ ಬಾಲಭವನದಲ್ಲಿ ನಡೆಯಲಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪಡಿಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ರೆನ್ನಿ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top