ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ.

ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

Also Read  ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ

 

 

 

error: Content is protected !!
Scroll to Top