ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮ್ಯಾಥ್ಯೂ ವೇಡ್ ನಿವೃತ್ತಿ ಘೋಷಣೆ

(ನ್ಯೂಸ್ ಕಡಬ) newskadaba.com ಕ್ಯಾನ್ ಬೆರಾ, ಅ. 29. ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಮ್ಯಾಥ್ಯೂ ವೇಡ್ ಅವರು ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 2021 ರಲ್ಲಿ ಆಸೀಸ್ ಪಡೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ. 2012ರ ಫೆಬ್ರವರಿಯಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಹಾಗೇಯೇ 2021ರ ಜುಲೈನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಟವಾಡಿದ್ದರು. ಈ ಮೂಲಕ ನಿವೃತ್ತಿ ಬೆನ್ನಲ್ಲೇ ಮ್ಯಾಥ್ಯೂ ವೇಡ್ ಸಹಾಯಕ ಕೋಚ್ ಆಗಿ ತಮ್ಮ ಹೊಸ ವೃತ್ತಿ ಬದುಕನ್ನ ಆರಂಭಿಸುತ್ತಿದ್ದಾರೆ.

Also Read  ಹುಡುಗಿಯೊಂದಿಗೆ ಆಂಬ್ಯಲೆನ್ಸ್ ನಲ್ಲಿ ಸೈರನ್ ಹಾಕಿ ಹೋದವನಿಗೆ ಬಿತ್ತು ಗೂಸಾ

 

 

 

error: Content is protected !!
Scroll to Top