(ನ್ಯೂಸ್ ಕಡಬ)newskadaba.com, ಅ. 29 ಜಮ್ಮು: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಹಳ್ಳಿಯೊಂದರ ಸಮೀಪ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 27 ಗಂಟೆಗಳ ಅವಧಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಸಾಗುತ್ತಿದ್ದ ಬೆಂಗಾವಲು ಪಡೆಯ ಸೇನಾ ಆಂಬ್ಯುಲೆನ್ಸ್ ಗೆ ಗುಂಡು ಹಾರಿಸಿದ ಮೂವರು ಭಯೋತ್ಪಾದಕರಲ್ಲಿ ಓರ್ವ ವಿಶೇಷ ಪಡೆಗಳು ಮತ್ತು ಎನ್ಎಸ್ಜಿ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಿನ್ನೆ ಸಂಜೆ ಮೃತಪಟ್ಟಿದ್ದ.
ಆ ಬಳಿಕ ಬತ್ತಲ್-ಖೌರ್ ಪ್ರದೇಶದ ಜೋಗ್ವಾನ್ ಗ್ರಾಮದ ಅಸ್ಸಾನ್ ದೇವಾಲಯದ ಬಳಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.