ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ

(ನ್ಯೂಸ್ ಕಡಬ) newskadaba.com ಅ. 29. ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಮಂಗಳವಾರದಂದು ಅರಂತೋಡಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು. ಈ ಸಂದರ್ಭದಲ್ಲಿ ನಿವೃತಗೊಳ್ಳಲಿರುವ ಸರಸ್ವತಿ ಮತ್ತು ಚಿದಾನಂದ ದಂಪತಿ ಕೊಡುಗೆಯಾಗಿ ನೀಡಿದ ದೀಪವನ್ನೂ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ನಿವೃತ್ತ ಶಿಕ್ಷಕಿ ಸರಸ್ವತಿಯವರನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಇದರ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲು ಅಭಿನಂದನಾ ಭಾಷಣ ಮಾಡಿದರು. ಸಮಾರಂಭದಲ್ಲಿ ಸುಳ್ಯ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ಶಿವಾನಂದ ಕುಕ್ಕುಂಬಳ, ಮಾಲಿನಿ ವಿನೋದ್, ಪುಷ್ಪಾಧರ ಕೊಡಕೇರಿ, ಶ್ವೇತಾ ಅರಮನೆ ಗಾಯ, ಮಮತಾ, ಧನಲಕ್ಷ್ಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಯು.ಕೆ, ಚಿದಾನಂದ ಅಡ್ತಲೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್, ನಿವೃತ್ತ ಉಪನ್ಯಾಸಕ ಅಬ್ದುಲ್ ಮಾಸ್ತರ್, ಅಭಿನಂದನಾ ಸಮಿತಿ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಮಜೀದ್ ಸೇರಿದಂತೆ ಮುಂತಾದವರು ಉಪಸ್ಥಿರಿದ್ದರು. ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಸ್ವಾಗತಿಸಿ ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top