ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್‌ ಟ್ಯಾಗ್‌ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರ (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

Also Read  ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ -  ಇಬ್ಬರು‌ ಸ್ಥಳದಲ್ಲೇ ಮೃತ್ಯು

 

 

 

error: Content is protected !!
Scroll to Top