ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 29. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ರೋಜಗಾರ್ ಯೋಜನೆ ಮುಖೇನ ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

ಧಾರವಾಡದಲ್ಲಿ ಇಂದು ಆಯೋಜಿಸಿದ್ದ ರೋಜಗಾರ್ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರೋಜಗಾರ್ ಮೇಳದಲ್ಲಿ ದೇಶಾದ್ಯಂತ ಇಂದು 51 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದೆ. ಮುಂದಿನ ದಿನ ಇದು ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದರು.

Also Read  ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ

 

 

error: Content is protected !!
Scroll to Top