ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ

(ನ್ಯೂಸ್ ಕಡಬ)newskadaba.com,. 29 ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು. ಈ ರೀತಿ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತ ಬರುತ್ತಿದೆ. ಅದೇನಿಟ್ಟಿನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಆರೋಪಿಸಿದರು. ಅವರ ನೇತೃತ್ವದಲ್ಲೇ ರೈತರಿಗೆ ಅನ್ಯಾಯ ಮಾಡುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು.

Also Read  ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ► ದೇಣಿಗೆ ನೀಡುವಾಗ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

error: Content is protected !!
Scroll to Top