ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ

(ನ್ಯೂಸ್ ಕಡಬ) newskadaba.com,. 30. ಧನ್ವಂತರಿಯ ಜನ್ಮದಿನದಂದು ದೇಶದಲ್ಲಿ 12,850 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ 4 ಯೋಜನೆಗಳ ಸಹಿತ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಆಯುಷ್ಮಾನ್‌ ಭಾರತ್ ಆರೋಗ್ಯ ಮೂಲಸೌಕರ್ಯ ಯೋಜನೆಯಡಿ ಕರ್ನಾಟಕ ಸೇರಿ ದೇಶದ 21 ಕಡೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಗಳ ನಿರ್ಮಾಣಕ್ಕೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ರಾಜ್ಯದ ನಾಲ್ಕು ಯೋಜನೆಗಳಾದ ಬೆಂಗಳೂರಿನ ಬೊಮ್ಮಸಂದ್ರ ಹಾಗೂ ಕೋಲಾರ ತಾಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಹಾಗೂ ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 23.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡ (ಕ್ರಿಟಿಕಲ್‌ ಕೇರ್‌ ಬ್ಲಾಕ್‌)ಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

Also Read  ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ

 

error: Content is protected !!
Scroll to Top