(ನ್ಯೂಸ್ ಕಡಬ) newskadaba.com ಅ. 30. ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.