(ನ್ಯೂಸ್ ಕಡಬ) newskadaba.com ಅ. 30. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿ ಇಂದು 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ.
ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ದರ್ಶನ್ಗೆ ವೈದ್ಯಕೀಯ ವರದಿ ಆಧರಿಸಿಯೇ ಮಧ್ಯಂತರ ಜಾಮೀನು ನೀಡಲಾಗಿದೆ. ಹೀಗಾಗಿ, ದರ್ಶನ್ ಅವರು ಮಂಜೂರಾಗಿರುವ 6 ವಾರಗಳ ಜಾಮೀನನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು.
ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್ ನಂತರ ಕೆಲ ಷರತ್ತುಗಳನ್ನು ಹಾಕಿದ್ದು, ಅದರಂತೆ ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದು. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್ ಗೆ ಸಲ್ಲಿಸಬೇಕು. ಪಾಸ್ ಪೋರ್ಟ್ ಅನ್ನು ಕೋರ್ಟ್ ಗೆ ಸರೆಂಡರ್ ಮಾಡಬೇಕು. ಜೊತೆಗೆ ಶೂಂಟಿಂಗ್ ಮಾಡುವಂತಿಲ್ಲ ಎಂದು ದರ್ಶನ್ಗೆ ಸೂಚನೆ ನೀಡಿದೆ.