ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಅ. 30. ಇದೇ ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಚುನಾವಣಾ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, 40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರನ್ನು ಕೈಬಿಡಲಾಗಿದೆ. ಇದೀಗ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ದೇವೇಗೌಡ, ಕುಮಾರಸ್ವಾಮಿ, ಸುರೇಶ್ ಬಾಬು, ಅನಿತಾ ಕುಮಾರಸ್ವಾಮಿ, ಸಾ.ರಾ.ಮಹೇಶ್, ಪುಟ್ಟರಾಜು, ಹರೀಶ್ ಗೌಡ, ಮಲ್ಲೇಶ್ ಬಾಬುಗೆ ಸ್ಥಾನ ನೀಡಲಾಗಿದೆ.

Scroll to Top