(ನ್ಯೂಸ್ ಕಡಬ) newskadaba.com ಅ. 30. ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮೃತಪಟ್ಟಿದ್ದು, ಇವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಮೃತಪಟ್ಟವರನ್ನು ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಲೀಲಾವತಿ ಅವರಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಉದನೆಯ ಕ್ಲಿನಿಕ್ ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಜ್ವರ ಹಿನ್ನೆಲೆ ಅ.25ರಂದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ, ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ರವಿವಾರ ಬೆಳಗ್ಗೆ ನಿಧನರಾದರು ಎಂದು ತಿಳಿದುಬಂದಿದೆ.