HSRP ನಂಬರ್ ಪ್ಲೇಟ್ ಅಳವಡಿಕೆಗೆ ನ. 20 ಕೊನೆಯ ಅವಕಾಶ..!

(ನ್ಯೂಸ್ ಕಡಬ) newskadaba.com ಅ. 30. ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಹಲವು ಬಾರಿ ಗಡುವು ನೀಡಿ ವಿಸ್ತರಿಸಲಾಗಿತ್ತು. ಆದರೇ ಇದೀಗ ವಾಹನ ಸವಾರರಿಗೆ ನವೆಂಬರ್.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಿ ಆದೇಶಿಸಲಾಗಿದೆ.

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗಿತ್ತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದ್ದು, ಈ ಹಿನ್ನೆಲೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 20ರ ವರೆಗೆ ಅವಧಿ ವಿಸ್ತರಿಸಿದೆ.

Also Read  ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು !

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು HSRP ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು HSRP ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ

error: Content is protected !!
Scroll to Top