ರಾಜ್ಯದಲ್ಲಿ 230 ಗೋಲ್‌ಗಪ್ಪ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, . 30. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೀದಿಯಲ್ಲಿ ಮಾರಲಾಗುವ ಪಾನಿಪುರಿ, ಗೋಲ್‌ಗಪ್ಪದ ಸ್ವಚ್ಛತೆ, ಶುದ್ಧತೆಯ ಬಗ್ಗೆ ಅನುಮಾನದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

165 ಘಟಕಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಗೋಲ್‌ಗಪ್ಪಾ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ, ಹಾರ್ಪಿಕ್ ಬಳಕೆ ಮಾಡಲಾಗುತ್ತಿರುವ ಕುರಿತಂತೆ ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆ ವರದಿ ಆಧರಿಸಿ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ.ವೈಷ್ಣವಿ ಅವರು, ರಾಜ್ಯದಲ್ಲಿ ಗೋಲ್‌ಗಪ್ಪ ಘಟಕಗಳಲ್ಲಿ ನೈರ್ಮಲ್ಯ ಕಾಪಾಡಲಾಗುತ್ತಿದೆಯೇ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ವಸ್ತುಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರು.

Also Read  ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..!

 

error: Content is protected !!
Scroll to Top