ಅಶ್ರಫ್ ಕಲಾಯಿ ಕೊಲೆ ಪ್ರಕರಣ ►ಪ್ರಮುಖ ಆರೋಪಿ ಭರತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. SDPI ಮುಖಂಡ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಎಂಬಾತನನ್ನು ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ.

ಜೂನ್ 21ರಂದು ಬೆಂಜನಪದವು ಬಳಿ ಅಶ್ರಫ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಕೊಲೆಗೆ ಸಂಚು ನಡೆಸಿದ ಇಬ್ಬರಲ್ಲಿ ಒಬ್ಬನಾದ ದಿವ್ಯರಾಜ್ ಶೆಟ್ಟಿ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ, ಹತ್ಯೆಗೆ ಸಂಚು ರೂಪಿಸಿದ್ದ ಮುಖಂಡ ಭರತ್ ಕುಮ್ಡೇಲುವನ್ನು ಇಂದು ಬಂಧಿಸಿದ್ದಾರೆ.

Also Read  ಬೋಟಿನಲ್ಲಿ ಆಯತಪ್ಪಿ ಬಿದ್ದು ತಲೆಗೆ ಏಟು !! ➤ ಮೀನುಗಾರ ಮೃತ್ಯು

ಕಲ್ಲಡ್ಕದಲ್ಲಿ ನಡೆದ ಹಲ್ಲೆ ಪ್ರಕರಣದ ನಂತರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭರತ್ ಕುಮ್ಡೇಲು ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಜೊತೆ ಕಾಣಿಸಿಕೊಂಡಿದ್ದ. ಇದು ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

error: Content is protected !!
Scroll to Top