ಇಂದಿನ ಹವಮಾನ

(ನ್ಯೂಸ್ ಕಡಬ)newskadaba.com,. 31 ಬೆಂಗಳೂರು: ಕಳೆದ ಹಲವು ದಿನಗಳಿಂದ ಸ್ವಲ್ಪವೂ ಬಿಡುವಿಲ್ಲದೇ ಬಂದ ಮಳೆ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ.

ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಬಿರುಸಿನ ಮಳೆಯಾಗಿದ್ದು, ಇಂದು ಕೂಡ ವಿವಿಧೆಡೆ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಅ.31ರಂದು ಗುರುವಾರ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗುಡಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Scroll to Top