(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಅದರಲ್ಲೂ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದ್ಯೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.