ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಅ. 31. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಶನಿವಾರ ಬೆಳಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವರು. ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top