ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

crime, arrest, suspected

(ನ್ಯೂಸ್ ಕಡಬ)newskadaba.com ವಿಟ್ಲ, . 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.50 ಲಕ್ಷ ರೂ ಎಂದು ಅಂದಾಜಿಸಲಾಗಿದೆ.

 

 

Scroll to Top