ದೇಶದೆಲ್ಲೆಡೆ ಏಕತಾ ದಿವಸ ಆಚರಣೆ- ಉಕ್ಕಿನ ಮನುಷ್ಯನಿಗೆ ಪ್ರಧಾನಿ ಮೋದಿಯಿಂದ ಗೌರವಾರ್ಪಣೆ

(ನ್ಯೂಸ್ ಕಡಬ)newskadaba.com ಅಹಮದಾಬಾದ್, . 31. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪುಷ್ಪ ನಮನ ಸಲ್ಲಿಸಿದರು.

ಅಕ್ಟೋಬರ್‌ 31 ರಂದು ಸರ್ದಾರ್‌ ವಲ್ಲಭಭಾಯಿ ಪಟೇಲರ ಜನ್ಮ ದಿನವನ್ನು ಏಕತಾ ದಿವಸ್‌ ಎಂದು ಆಚರಿಸಲಾಗುತ್ತದೆ.  ಗುಜರಾತ್‌ನ ಏಕತಾ ಪ್ರತಿಮೆಯ ಬಳಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ಭಾಗವಹಿಸಿದ್ದಾರೆ. ಪುಷ್ಪನಮನ ಸಲ್ಲಿಸಿದ ನಂತರ ಮಾತನಾಡಿದ ಮೋದಿ “ಪಟೇಲ್‌ ಒಬ್ಬ ಧೀಮಂತ ನಾಯಕರಾಗಿದ್ದರು. ಅವರ ಕಾರ್ಯಗಳು ಮುಂದಿನ ಪೀಳಿಗೆಗೆ ಮಾದರಿಯಾಗಿವೆ. ಭಾರತದ ಏಕತೆ ಹಾಗೂ ಸಾರ್ವಭೌಮತೆಯನ್ನು ಕಾಪಾಡುವಲ್ಲಿ ಅವರ ಪಾತ್ರ ದೊಡ್ಡದು. ಅವರು ನಡೆದ ದಾರಿ ನಮಗೆಲ್ಲ ಸ್ಪೂರ್ತಿ” ಎಂದು ಹೇಳಿದರು.

Also Read  ಹಿಜಾಬ್ ಧರಿಸಿದ್ದಕ್ಕೆ ವೈದ್ಯೆಗೆ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ➤ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು

 

 

error: Content is protected !!
Scroll to Top