ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, . 31. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸದ್ದಿಗೆ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಲಾಖೆ ಕೆಲವು ಸೂಚನೆಗಳನ್ನು ನೀಡಿದೆ.

ಸಿಡಿಮದ್ದುಗಳ ಶಬ್ದಮಾಲಿನ್ಯದಿಂದ ಸಾಕುಪ್ರಾಣಿಗಳಿಗೆ, ಜಾನುವಾರುಗಳಿಗೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರು ಗಳಿಗೆ ಉಂಟಾಗಬಹುದಾದ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರ ಸ್ನೇಹಿ ಸಿಡಿಮದ್ದುಗಳನ್ನು ಮಾತ್ರ ಸಿಡಿಲು ಅವಕಾಶ ನೀಡಬೇಕು. ಪಟಾಕಿ ಸಿಡಿಸುವ ಸಂದರ್ಭಗಳಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ತಿಳಿಸುವಂತೆ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

 

 

 

error: Content is protected !!
Scroll to Top