(ನ್ಯೂಸ್ ಕಡಬ) newskadaba.com ಅ. 31. ವಕ್ಫ್ ವಿವಾದದ ವಿಚಾರವಾಗಿ ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ನಡೆದಿದೆ.
ಉದ್ರಿಕ್ತರ ಗುಂಪೊಂದು ವಾಸವಿದ್ದ ಮನೆಗಳನ್ನು ಖಾಲಿ ಮಾಡಿಸಬಹುದು ಎಂಬ ಭೀತಿಯಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಘಟನೆಯ ಕುರಿತು ಮಾತನಾಡಿದ ಹಾವೇರಿ ಎಸ್ಪಿ ಅಂಶು ಕುಮಾರ್, 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಉದ್ರಿಕ್ತರು ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಲಾಟೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇವೆ ಎಂದಿದ್ದಾರೆ. ಕಡಕೋಳ ಗ್ರಾಮದಲ್ಲಿ ರೂಟ್ ಮಾರ್ಚ್ ಮಾಡಲಾಗುತ್ತದೆ. ಭದ್ರತೆಗೆ ನಾಲ್ಕು ಕೆಎಸ್ಆರ್ಪಿ ತುಕಡಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಎಸ್ಪಿ ಅಂಶು ಕುಮಾರ್ ಮಾಹಿತಿ ನೀಡಿದ್ದಾರೆ.