’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ)newskadaba.com ಅಹಮದಾಬಾದ್, ಅ. 31.  ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಶೀಘ್ರದಲ್ಲೇ ಒಂದು ದೇಶ, ಒಂದು ಎಲೆಕ್ಷನ್‌ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.

ಒನ್ ನೇಷನ್, ಒನ್ ಎಲೆಕ್ಷನ್’ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದಿರುವ ಪ್ರಧಾನಿ ಮೋದಿ, ದೇಶದ ಎಲ್ಲಾ ಚುನಾವಣೆಗಳನ್ನು ಒಂದೇ ದಿನದಲ್ಲಿ ಅಥವಾ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ನಡೆಸುವ ಗುರಿಯನ್ನು ಹೊಂದಿರುವ ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ ಮತ್ತು ಅದು ನಿಜವಾಗಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.

Also Read  ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ

 

 

error: Content is protected !!
Scroll to Top