(ನ್ಯೂಸ್ ಕಡಬ) newskadaba.com ಕಡಬ, ಮಾ.21. ನಾಳೆ ಮಾ.22 ರಂದು ನಡೆಯಬೇಕಿದ್ದ ಕಡಬ ತಾಲೂಕು ಉದ್ಘಾಟನಾ ಕಾರ್ಯಕ್ರಮವು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ. ಪಿ. ವರ್ಗೀಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಒಂದು ಬಾರಿ ದಿನ ನಿಗದಿಯಾಗಿದ್ದರೂ ಕಾರಣಾಂತರಗಳಿಂದಾಗಿ ಮುಂದೂಡಲಾಗಿತ್ತು. ಆದರೆ ಈ ಬಾರಿಯೂ ಮುಂದೂಡಲಾಗಿದ್ದು, ಕಡಬ ಪರಿಸರದ ಜನತೆಗೆ ಇದರಿಂದಾಗಿ ನಿರಾಶೆ ಕಾದಿದೆ. ಮಾರ್ಚ್ ತಿಂಗಳೊಳಗಾಗಿ ಅಧಿಕೃತವಾಗಿ ಉದ್ಘಾಟನೆಗೆ ದಿನ ನಿಗದಿ ಪಡಿಸಲಾಗುವುದು ಎಂದು ಪಿ.ಪಿ. ವರ್ಗೀಸ್ ತಿಳಿಸಿದ್ದಾರೆ.