ಅನ್ನಭಾಗ್ಯ ಯೋಜನೆ- 8,433 ಕೋಟಿ ರೂ. ಹಣ ವರ್ಗಾವಣೆ

(ನ್ಯೂಸ್ ಕಡಬ) newskadaba.com ನ. 01.  ಸರಕಾರದ ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 2023 ರ ಜುಲೈ ತಿಂಗಳಿನಿಂದ ಇಲ್ಲಿಯವರೆಗೆ 51.39 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ 8,433 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

Also Read  ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ 49 ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,09,491 ಅರ್ಹ ಫಲಾನುಭವಿಗಳಿಗೆ 12,19,610 ರೂ.ಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಅನ್ನ ಸುವಿಧ ಯೋಜನೆಯನ್ನು ಜಾರಿಗೆ ತರಲಾಗಿದ್ದು, 90 ವರ್ಷ ವಯಸ್ಸಿನ ಹಿರಿಯ ನಾಗರಿಕರ ಮನೆಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸಲಾಗುತ್ತಿದೆ. ರಾಜ್ಯದಲ್ಲಿ 7,743 ಫಲಾನುಭವಿಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 107 ಪಡಿತರ ಚೀಟಿದಾರರಿಗೆ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.

error: Content is protected !!
Scroll to Top