ಕಡಬ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.02. ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top