ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ನ. 02. ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡ್ ಬಳಿ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ (25) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿಂದ ತೊಕ್ಕೊಟ್ಟುವಿನಲ್ಲಿ ಪುಡ್ ಕಾರ್ನರ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಕಾಪಿಕಾಡ್ ನಲ್ಲಿ ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತಿಂಗಳ ಹಿಂದೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸರಗೊಂಡ ಪತ್ನಿ ಪತಿಯನ್ನು ಬಿಟ್ಟು ಕುವೈತ್ ಗೆ ಹೋಗಿದ್ದರು.‌ ಇದೇ ಕಾರಣದಿಂದ ನೊಂದು ಈತ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರ .ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top