ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com . 05 ಬಂಟ್ವಾಳ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯನ್ನು ದೇವಲದ ಬಾಗಿಲು ಮುರಿದು ಖದೀಮರು ಕಳ್ಳತನ  ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ನಡೆದಿದೆ.

ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವು ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ 2.30 ಲಕ್ಷ ನಗದು ಎಗರಿಸಿದ್ದಾರೆ ಕಳ್ಳರು.

Also Read  ಪುತ್ತೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಪ್ರಕರಣ ► ಕಟ್ಟಡ ಮಾಲಕ, ಇಂಜಿನಿಯರ್, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು

error: Content is protected !!
Scroll to Top