ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ನ. 05. ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ.

ಮೃತಪಟ್ಟವರನ್ನು ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್ ಕೆಲಸಕ್ಕಾಗಿ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸು ಬರುತ್ತಿದ್ದಾಗ ಪವರ್ ಗ್ರಿಡ್ ಬಳಿ ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಪಶ್ವಿಮ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Also Read  ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

 

 

error: Content is protected !!
Scroll to Top