ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. 2012ರ ಪೋಕ್ಸೋ ಕಾಯಿದೆಯಡಿ ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸಾಮಾಜಿಕ ಕಾರ್ಯ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಶಿಕ್ಷಣ, ಅಭಿವೃದ್ಧಿ, ರಕ್ಷಣೆ ವಿಷಯದಲ್ಲಿ ಕನಿಷ್ಠ 3 ವರ್ಷ ಅನುಭವವುಳ್ಳ ಪದವೀಧರರು, ಮಕ್ಕಳ ಹಕ್ಕುಗಳು ಅಥವಾ ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಅಧಿಕಾರಿಗಳೂ ಅರ್ಜಿ ಸಲ್ಲಿಸಬಹುದು.

ಪ್ರತಿ ಪ್ರಕರಣಕ್ಕೆ ರೂ. 3000/- (ರೂಪಾಯಿ ಮೂರು ಸಾವಿರ) ಸಂಭಾವನೆ ನಿಗದಿಗೊಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.

Also Read  ಶಿರಾಡಿ, ಅಡ್ಡಹೊಳೆಗೆ ನಕ್ಸಲರ ಆಗಮನದ ಹಿನ್ನೆಲೆ ►ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭ

ಅರ್ಜಿಗಳನ್ನು ಪ್ರಮಾಣ ಪತ್ರಗಳೊಂದಿಗೆ ನವೆಂಬರ್ 6ರಿಂದ 21ರ ವರೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಯವರ ಕಛೇರಿ ಸಂಕೀರ್ಣ, 1ನೇ ಮಹಡಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು-575001 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಛೇರಿಯಿಂದ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 0824-2440004 ಗೆ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top