ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಅಕ್ರಮವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಅರಣ್ಯ ಸಂಚಾರ ಪೊಲೀಸ್ ದಳ ಇಲ್ಲಿನ ಆನಂದಪುರದ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಎಂದು ಗುರುತಿಸಲಾಗಿದೆ. ಆತನಿಂದ ಚಿರತೆಯ 16 ಉಗುರು, 3 ಹಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಅರಣ್ಯ ಸಂಚಾರ ಪೊಲೀಸ್ ದಳದವರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಂಚಾರ ಪೊಲೀಸರು ತಿಳಿಸಿದ್ದಾರೆ.

Also Read  ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..!

 

 

error: Content is protected !!
Scroll to Top