ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 05. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ.

ಅಮೆರಿಕದ ಪ್ರಜೆಗಳು ದೇಶದ 47ನೇ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತದಾನ ಮಾಡಲಿದ್ದಾರೆ. 7.8 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ‘ಮೇಲ್-ಇನ್’ ಮೂಲಕ ಮತದಾನ ಮಾಡಿದ್ದಾರೆ ಎಂದು ಯುನಿವರ್ಸಿಟಿ ಆಫ್ ಫ್ಲೋರಿಡಾದ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

 

Scroll to Top