ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!

(ನ್ಯೂಸ್ ಕಡಬ) newskadaba.com ನ. 05. ತನ್ನ ಫೇಸ್‌ ಬುಕ್ ಫ್ರೆಂಡ್ ಲಿಸ್ಟ್ ನಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸೂಕ್ತ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಅತ್ತ ಕಡೆಯಿಂದ ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನದೇಹವನ್ನು ಪ್ರದರ್ಶಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ ವೀಡಿಯೊ ಕರೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಯ ಮುಖವನ್ನು ಬಳಸಿ ಅಶ್ಲೀಲ ವೀಡಿಯೊಗೆ ಎಡಿಟ್ ಮಾಡಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೇರೊಬ್ಬ ವ್ಯಕ್ತಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯನ್ನು ಈತನ ಮುಂದಿರಿಸಿದ್ದಾನೆ. ಇದರಿಂದ ಕಂಗೆಟ್ಟ ವಿದ್ಯಾರ್ಥಿಯು ಈ ವಿಚಾರವನ್ನು ಮಾಧ್ಯಮ ಪ್ರತಿನಿಧಿಯ ಸಲಹೆಯಂತೆ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಸೈಬರ್ ಕ್ರೈಮ್ ವಿಭಾಗಕ್ಕೆ ಮಾಹಿತಿ ನೀಡಿದ್ದಾರೆ.

Scroll to Top