(ನ್ಯೂಸ್ ಕಡಬ) newskadaba.com ನ. 05. ಕೇಂದ್ರ ಸಚಿವ ಎಚ್.ಡಿ.ಕೆ ವಿರುದ್ಧ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ನೀಡಿರುವ ದೂರಿನನ್ವಯ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್.ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ಸಂಜಯ ನಗರ ಠಾಣೆಯಲ್ಲಿ ಕುಮಾರಸ್ವಾಮಿ ಸೇರಿದಂತೆ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.