ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05.  ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ.

ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.

Also Read  ಪದಗ್ರಹಣ ಸಮಾರಂಭಕ್ಕೆ ರೈಲಿನಲ್ಲಿ ಆಗಮಿಸಿ, ಸರಳತೆ ಮೆರೆದ ಶಾಸಕ.!

 

 

error: Content is protected !!
Scroll to Top